News : ಕೇಂದ್ರ ಸರ್ಕಾರವು ವಿವಿಧ ಇಲಾಖೆಗಳಲ್ಲಿನ ಗ್ರೂಪ್ 'ಬಿ' ಮತ್ತು 'ಸಿ' ಹುದ್ದೆಗಳ ನೇಮಕಾತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮೂಲಕ ಅರ್ಜಿ ಆಹ್ವಾನಿಸಿದೆ. ಒಟ್ಟು 12,256 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು SSC ಪೋರ್ಟಲ್ ಮೂಲಕ 2026ರ ಜೂನ್ 22ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು, ಅರ್ಜಿ ಪ್ರಕ್ರಿಯೆ, ಶುಲ್ಕದ ವಿವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 2026ರ ಮೇ 21
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2026 ರ ಜೂನ್ 22
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 2026ರ ಜೂನ್ 23
ಖಾಲಿ ಇರುವ ಹುದ್ದೆಗಳು :
ಸಹಾಯಕ ವಿಭಾಗ ಅಧಿಕಾರಿ
ಲೆಕ್ಕಪರಿಶೋಧಕರು
ಲೆಕ್ಕಪರಿಶೋಧಕ
ಜೂನಿಯರ್ ಸ್ಟಾಟಿಸ್ಟಿಕಲ್ ಆಫೀಸರ್
ತೆರಿಗೆ ಸಹಾಯಕ
ಈ ಮೇಲಿನ ಹುದ್ದೆಗಳು ಸೇರಿದಂತೆ ಇತರೆ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕವಿದೆ. ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ, ಪಂಗಡ, ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ.
ವಯೋಮಿತಿ :
18 ರಿಂದ 32 ವರ್ಷದೊಳಗಿನವರಾಗಿರಬೇಕು. ಪರಿಶಿಷ್ಟ ಜಾತಿ, ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸೇರಿದಂತೆ ವರ್ಗಕ್ಕೆ ಅನುಗುಣವಾಗಿ ವಯೋಮಿತಿ ಸಡಿಲಿಕೆಯೂ ಇರಲಿದೆ.
ಸಂಬಳ:
₹25,500 ರಿಂದ ₹1,51,100 ರವರೆಗೆ ಇರಲಿದೆ.
ಅರ್ಹತೆಗಳು :
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿವಿಧ ವಿಷಯಗಳಲ್ಲಿ ಪದವಿಯನ್ನು ಪೂರ್ಣಗೊಳಿಸಿದವರು ಹಾಗೂ ಅಂತಿಮ ವರ್ಷದಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಿಗಳಿಗಾಗಿ ಅಧಿಸೂಚನೆಯನ್ನು ವಿಕ್ಷಿಸಿ